ಡ್ರಾಗನ್ ಹಣ್ಣು ಬೆಳೆದು ಯಶಸ್ಸು ಕಂಡ ರೈತ ಡ್ರಾಗನ್ ಹಣ್ಣು: ಚಿತ್ರನಾಯಕನಹಳ್ಳಿ ನಾರಾಯಣರೆಡ್ಡಿಗೆ ಉತ್ತಮ ಆದಾಯ ಕೈಹಿಡಿದ ನರೇಗಾ.

by | 29/09/23 | ಕೃಷಿ


ಚಳ್ಳಕೆರೆ ಸೆ.29:
ಜಿಲ್ಲೆಯ ಚಳ್ಳಕೆರೆ ತಾಲ್ಲೂಕು ರಾಜ್ಯದಲ್ಲಿಯೇ ಅತ್ಯಂತ ಕಡಿಮೆ ಮಳೆ ಬೀಳುವ ತಾಲ್ಲೂಕು ಆಗಿದ್ದರೂ ಇಲ್ಲಿನ ರೈತರ ಪ್ರಯೋಗಶೀಲತೆಯಲ್ಲಿ ಕೊರತೆ ಕಾಣದು. ಚಳ್ಳಕೆರೆ ತಾಲ್ಲೂಕಿನ ಚಿತ್ರನಾಯಕನಹಳ್ಳಿ ಗ್ರಾಮದ ಶ್ರೀ ನಾರಾಯಣರೆಡ್ಡಿ ಬಿನ್ ಲೇಟ್ ನಣಜೀವರೆಡ್ಡಿ ರವರು ಕಡಿಮೆ ನೀರಿನಲ್ಲಿ ಉತ್ತಮ ಬೆಳೆ ಕೊಡುವ ಅಪ್ರಧಾನ ಹಣ್ಣಿನ ಜಾತಿಯ ಡ್ರಾಗನ್ ಹಣ್ಣಿನ ಬೆಳೆ ಬೆಳೆದು ಉತ್ತಮ ಆದಾಯ ಗಳಿಸುತ್ತಿದ್ದಾರೆ.
ಈ ಹಿಂದೆ ಇವರು ಇರುವ 2 ಎಕರೆ ಜಮೀನಿನಲ್ಲಿ ಮೆಕ್ಕೆಜೋಳ. ಟೊಮೋಟೋ, ಈರುಳ್ಳಿ ಬೆಳೆಯುತ್ತಿದ್ದರೂ, ಕಡಿಮೆ ನೀರಿರುವ ಕಾರಣ ಲಾಭ ನಿರೀಕ್ಷಿತ ಮಟ್ಟದಲ್ಲಿ ಬಂದಿರುವುದಿಲ್ಲ. ಆದ ಕಾರಣ ಕಡಿಮೆ ನೀರಿನಲ್ಲಿ ಬೆಳೆಯಬಹುದಾದ ಬೆಳೆಯ ಕುರಿತಾಗಿ ತೋಟಗಾರಿಕೆ ಇಲಾಖೆ ರೈತ ಸಂಪರ್ಕ ಕೇಂದ್ರದ ತೋಟಗಾರಿಕೆ ಅಧಿಕಾರಿ ಅವರಿಂದ ಡ್ರಾಗನ್ ಹಣ್ಣಿನ ಬೆಳೆ ಕುರಿತಾಗಿ ಮಾಹಿತಿ ಪಡೆದು ಮಹಾತ್ಮಗಾಂಧಿ ಉದ್ಯೋಗ ಖಾತರಿ ಯೋಜನೆಯ ಸದುಪಯೋಗ ಪಡೆಯಲು ಆಸಕ್ತಿ ತೋರಿ ಡ್ರಾಗನ್ ಹಣ್ಣಿನ ಬೆಳೆಯನ್ನು ಬೆಳೆದಿದ್ದಾರೆ.
2 ಎಕರೆಯಲ್ಲಿ 10*9 ಅಡಿ ಅಂತರದಲ್ಲಿ ಸುಮಾರು 960 Poleಗಳನ್ನು ನೆಟ್ಟು 3840 ಸಸಿಗಳನ್ನು ನಾಟಿ ಮಾಡಿರುತ್ತಾರೆ. ರೂ. 55 ಕ್ಕೆ 01 ರಂತೆ ರೋಜ್ ರೆಡ್ ತಳಿಯ ಸಸಿಯನ್ನು ದೊಡ್ಡಬಳ್ಳಾಪುರದಿಂದ ಖರೀದಿ ಮಾಡಿ ಕೊಟ್ಟಿಗೆ ಗೊಬ್ಬರ ಹಾಕಿ ನಾಟಿ ಮಾಡಿರುತ್ತಾರೆ. ಸಸಿ ನಾಟಿ ಮಾಡಿದ

ನಂತರ 1.5 ವರ್ಷಕ್ಕೆ ಇಳುವರಿ ಪ್ರಾರಂಭವಾಗಿರುತ್ತದೆ. ಹೂ ಕಚ್ಚಿದ ಸಮಯದಲ್ಲಿ 3-4 ದಿನಗಳಿಗೊಮ್ಮೆ ನೀರು ಹರಿಸಬೇಕು. ಉಳಿದಂತೆ ವಾರಕೊಮ್ಮೆ ನೀರು ಹರಿಸಿದರೆ ಸಾಕು. ಹೂ ಕಚ್ಚಿದ 1.5 ತಿಂಗಳಿಗೆ ಹಣ್ಣು ಕಟಾವಿಗೆ ಬರುತ್ತದೆ.
ನಾರಾಯಣ ರೆಡ್ಡಿಯವರು ಮೊದಲನೆ ಬೆಳೆ ಹಣ್ಣು ಕಟಾವು ಮಾಡಿ ಬೆಂಗಳೂರು ಮಾರುಕಟ್ಟೆಯಲ್ಲಿ ಬಾಂಬೆ ಕಂಪನಿಯ ಖರೀದಿದಾರರಿಗೆ ಕೆ.ಜಿ.ಗೆ ರೂ.110-120 ರಂತೆ ಮೂರು ಬಾರಿ ಕಟಾವಿನ ಒಟ್ಟು 6 ಟನ್ ಹಣ್ಣನ್ನು ಮಾರಾಟ ಮಾಡಿರುತ್ತಾರೆ. ಒಂದು ಹಣ್ಣಿನ ತೂಕ 400-500 ಗ್ರಾಂ ವರೆಗೂ ಬಂದಿರುತ್ತದೆ. ಮೊದಲನೇ ಬೆಳೆಯಿಂದ ನಾಟಿ ಮಾಡಿದ ಬಂಡವಾಳದ ಹಣವನ್ನು ಪಡೆದಿರುತ್ತಾರೆ.
ಮುಂಬರುವ ದಿನಗಳಲ್ಲಿ ಬರುವ ಬೆಳೆಯಿಂದ ಲಾಭದ ಮೊತ್ತದ ನಿರೀಕ್ಷೆಯಲ್ಲಿದ್ದಾರೆ. ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಪಡೆದ 1.5 ಲಕ್ಷ ಸಹಾಯಧನದಿಂದ ಪ್ರಾರಂಭಿಕ ಬಂಡವಾಳಕ್ಕೆ ಅನುಕೂಲವಾಗಿರುತ್ತದೆ ಹಾಗೂ ಹನಿ ನೀರಾವರಿ ಒಗ್ಗೂಡಿಸುವಿಕೆ ಅಡಿಯಲ್ಲಿ ಹನಿ ನೀರಾವರಿಗೆ ಸಹಾಯಧನ ಪಡೆದಿರುತ್ತಾರೆ.
ಸರ್ಕಾರದ ಯೋಜನೆಗಳ ಸಹಾಯಧನದಿಂದಾಗಿ ಸಾಲದ ಹೊರೆ ಕಡಿಮೆಯಾಗಿ ಪ್ರಾರಂಭಿಕ ಬಂಡವಾಳಕ್ಕೆ ಹೆಚ್ಚಿನ ಅನುಕೂಲವಾಗಿರುವ ಕುರಿತಾಗಿ ಹರ್ಷ ವ್ಯಕ್ತಪಡಿಸಿರುತ್ತಾರೆ. ಜಿಲ್ಲೆಯ ರೈತರಿಗೆ ಸರ್ಕಾರದ ಯೋಜನೆಗಳ ಸದುಪಯೋಗ ಪಡಿಸಿಕೊಳ್ಳಲು ಸಲಹೆ ನೀಡಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9740153343, 8951820256 ಕ್ಕೆ ರೈತರನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಸವಿತಾ ತಿಳಿಸಿದ್ದಾರೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page