ದೇಶದಲ್ಲಿ ಸ್ವಾಮಿನಾಥನ್ ಆಯೋಗದ ವರದಿ ಜಾರಿಯಾದರೆ ಮಾತ್ರ ರೈತರ ಬದುಕು ಹಸನಾಗಲು ಸಾಧ್ಯ: ಕೊಡಿಹಳ್ಳಿ ಚಂದ್ರಶೇಖರ್ .

by | 09/05/24 | ಕೃಷಿ

ಚಳ್ಳಕೆರೆ: ದೇಶದಲ್ಲಿ ಅನ್ನ ಹಾಕುವ ರೈತರು ಎಂದಿಗೂ ಸಹ ಬಡವರಾಗಿ ಇದ್ದಾರೆ ಆದರೆ ದಲ್ಲಾಳಿಗಳು ಮಾತ್ರ ಕೋಟ್ಯಾಧಿಪತಿಗಳಾಗಿ ಬದಲಾಗಿದ್ದಾರೆ ಇದಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೃಷಿ ನೀತಿಗಳು ಕಾರಣವಾಗಿವೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಆಕ್ರೋಶ ವ್ಯಕ್ತಪಡಿಸಿದರು. 

ತಾಲೂಕಿನ ಬುಡ್ನಹಟ್ಟಿ ಗ್ರಾಮದಲ್ಲಿ ರೈತ ಸಂಘದ ಗ್ರಾಮ ಘಟಕದ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ರೈತರ ಮತವನ್ನು ಪಡೆದ ಪಕ್ಷಗಳು ರೈತರ ಪರವಾದ ಯಾವುದೇ ಯೋಜನೆಗಳನ್ನು ತಮ್ಮ ಪ್ರಣಾಳಿಕೆಗಳಲ್ಲಿ ಘೋಷಿಸದೆ ಇರುವುದು ನೋವಿನ ಸಂಗತಿಯಾಗಿದೆ ಕೇವಲ ರೈತ ಕುಟುಂಬಗಳನ್ನು ಮತ ಬ್ಯಾಂಕ್ ಗಾಗಿ ಚುನಾವಣಾ ಸಂದರ್ಭದಲ್ಲಿ ಬರಪೂರ ಭರವಸೆಗಳನ್ನು ನೀಡುವ ಪಕ್ಷಗಳು ಗೆದ್ದ ನಂತರ ರೈತರನ್ನು ಕಡೆಗಣಿಸುತ್ತಿದ್ದಾರೆ ಇದನ್ನು ರೈತರು ಅರ್ಥ ಮಾಡಿಕೊಂಡು ಚುನಾವಣಾ ಸಂದರ್ಭದಲ್ಲಿ ಎಚ್ಚರಿಕೆಯಿಂದ ಮತ ಚಲಾಯಿಸುವುದು ಅತ್ಯವಶ್ಯಕವಾಗಿದೆ ಎಂದು ಕರೆ ನೀಡಿದರು. 

ಸ್ವಾಮಿನಾಥನ್ ಆಯೋಗದ ವರದಿ ಜಾರಿಯಾಗಲಿ: ಇದೆ ವೇಳೆ ಮಾತನಾಡಿದ ಅವರು 20 ವರ್ಷಗಳ ಹಿಂದೆ ಸ್ವಾಮಿನಾಥನ್ ಆಯೋಗ ರೈತರ ಜೀವನವನ್ನು ಸುಧಾರಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸರ್ಕಾರಕ್ಕೆ ವರದಿ ನೀಡಿದರು ಸಹ ಅಧಿಕಾರಕ್ಕೆಬಂದ ಎಲ್ಲಾ ಸರ್ಕಾರಗಳು ನಿರ್ಲಕ್ಷ ವಹಿಸಿದ್ದರಿಂದ ಇಂದಿಗೂ ಸಹ ರೈತರ ಜೀವನ ಮಟ್ಟ ಸುಧಾರಿಸುವಲ್ಲಿ ಸಾಧ್ಯವಾಗಿಲ್ಲ ಅಧಿಕಾರಕ್ಕೆ ಬರುವ ಮುನ್ನ ಪ್ರಧಾನಿ ಮೋದಿಯವರು 300 ಬಾರಿ ಭಾಷಣ ಮಾಡಿ ಸ್ವಾಮಿನಾಥನ್ ಆಯೋಗ ವರದಿಯನ್ನು ಜಾರಿಗೆ ತರುತ್ತೇವೆ ಎಂದು ಹೇಳಿದ್ದರು ಆ ಮಾತನ್ನು ಈಗ ಮರೆತಂತೆ ಕಾಣುತ್ತಿದೆ ಸ್ವಾಮಿನಾಥನ್ ಆಯೋಗದ ವರದಿಯನ್ನು ಸಂವಿಧಾನಾತ್ಮಕವಾಗಿ ಜಾರಿಗೆ ತಂದಾಗ ಮಾತ್ರ ರೈತರ ಬದುಕು ಸುಧಾರಿಸಲು ಸಾಧ್ಯ ಇನ್ನಾದರೂ ರೈತರು ಎಚ್ಚೆತ್ತುಕೊಂಡು ತಮ್ಮ ಬೇಡಿಕೆಗಳನ್ನು ಈಡೇರಿಸುವ ಹಾಗೂ ರೈತ ಪರ ಚಿಂತನೆಗಳನ್ನು ಹಾಗೂ ಹೋರಾಟಗಳನ್ನು ಮಾಡುವ ವ್ಯಕ್ತಿಗಳನ್ನು ಚುನಾವಣೆಗಳಲ್ಲಿ ಗೆಲ್ಲಿಸುವ ಶಪಥ ಮಾಡಬೇಕು ಎಂದು ತಿಳಿಸಿದರು.


ರೈತ ಸಂಘದ ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಸಂಘದ ಬೋರ್ಡ್ ಅನಾವರಣಗೊಳಿಸಿ ಮಾತನಾಡಿದ ಅವರು ನಂಜುಂಡಸ್ವಾಮಿಯವರ ಪರಿಶ್ರಮದಿಂದಾಗಿ ರೈತರ ಮನೆಗಳಿಗೆ ಬ್ಯಾಂಕ್ ಅಧಿಕಾರಿಗಳು ಬೀಗ ಹಾಕುವುದನ್ನು ನಿಲ್ಲಿಸಿದ್ದರು ಕೊಡಿಹಳ್ಳಿ ಚಂದ್ರಶೇಖರ್ ಅವರು ರೈತ ಸಂಘಕ್ಕಾಗಿ ಹಲವಾರು ಹೋರಾಟಗಳನ್ನು ಮಾಡುತ್ತಾ ಬಂದಿದ್ದಾರೆ ಸರ್ಕಾರಗಳು ಬದಲಾದರೂ ಸಹ ರೈತ ಸಂಘಟನೆಗಳು ಬದಲಾಗಲು ಸಾಧ್ಯವಿಲ್ಲ ರೈತರು ಬಣಗಳಾಗಿ ರೂಪುಗೊಳ್ಳದೆ ಒಗ್ಗಟ್ಟಾಗಿ ಹೋರಾಡಿದಾಗ ಮಾತ್ರ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದು ಕಿವಿ ಮಾತು ಹೇಳಿದರು. ಕಾರ್ಯಕ್ರಮಕ್ಕೂ ಮುನ್ನಾ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಧ್ಯಕ್ಷರಾದ‌ ಕೋಡಿಹಳ್ಳಿ ಚಂದ್ರಶೇಖರ್ ಹಾಗೂ ತಾಲೂಕು ಅಧ್ಯಕ್ಷರಾದ ರೆಡ್ಡಿಹಳ್ಳಿ ವೀರಣ್ಣ ಎತ್ತಿನ ಬಂಡಿಯಲ್ಲಿ ಕೂರಿಸಿ  ರೈತರೊಂದಿಗೆ ಗ್ರಾಮದಲ್ಲಿ ಮೇರವಣಿಗೆ ಮಾಡಲಾಯಿತು

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಹನುಂತಪ್ಪ ತುಮಕೂರು ಜಿಲ್ಲಾಧ್ಯಕ್ಷ ಧನುಂಜಯ ಚಂದ್ರಪ್ಪ,ತಾ.ಗೌರವಾಧಯಕ್ಷ ಚನ್ನಕೇಶವಮೂರ್ತಿ ಸಂಘಟನಾ ಕಾರ್ಯದರ್ಶಿ ಟಿ.ತಿಪ್ಪೇಸ್ವಾಮಿ,ಓಬಯ್ಯ, ಮಹಿಳಾ ಘಟಕದ ಅಧ್ಯಕ್ಷೆ ಓಬಮ್ಮ, ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page