ಪ್ರತಿಷ್ಠಿತ ಶಾಲೆಗಳಿಗೆ ಪ್ರತಿಭಾವಂತ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಆಯ್ಕೆ: 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

by | 17/05/23 | ಶಿಕ್ಷಣ

ಚಿತ್ರದುರ್ಗ(ಜನಧ್ವನಿ ವಾರ್ತೆ) ಮೇ.17:
2023-24ನೇ ಸಾಲಿಗೆ “ಪ್ರತಿಷ್ಠಿತ ಶಾಲೆಗಳಿಗೆ ಪ್ರತಿಭಾವಂತ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳನ್ನು” ಸೇರ್ಪಡೆ ಮಾಡುವ ಕಾರ್ಯಕ್ರಮದಡಿ ಚಿತ್ರದುರ್ಗ ಜಿಲ್ಲೆ ವ್ಯಾಪ್ತಿಯಲ್ಲಿ 5ನೇ ತರಗತಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ 6ನೇ ತರಗತಿಗೆ ಪ್ರವೇಶ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ.25 ಕೊನೆಯ ದಿನವಾಗಿದೆ.
ಅರ್ಜಿಗಳನ್ನು ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ಅಥವಾ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರು ಗ್ರೇಡ್-1&2 ಸಮಾಜ ಕಲ್ಯಾಣ ಇಲಾಖೆಯ ಕಚೇರಿ ವೇಳೆಯಲ್ಲಿ ಮೇ.17 ರಿಂದ 25 ರವರೆಗೆ ಪಡೆಯಬಹುದು. ಭರ್ತಿಮಾಡಿದ ಅರ್ಜಿಯನ್ನು ಮೇ.25ರ ಸಂಜೆ 5.30ರೊಳಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ಅಥವಾ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಕಾರ್ಯಾಲಯಕ್ಕೆ ಸಲ್ಲಿಸುವುದು. ಕೊನೆಯ ದಿನಾಂಕ ಮುಗಿದ ನಂತರ ಬಂದಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಷರತ್ತುಗಳು: ವಿದ್ಯಾರ್ಥಿಯು ಪರಿಶಿಷ್ಟ ಜಾತಿಗೆ ಸೇರಿದ್ದು, ವಿದ್ಯಾರ್ಥಿಯ ಕುಟುಂಬದ ಆದಾಯ ರೂ.2.50 ಲಕ್ಷ(ಎರಡು ಲಕ್ಷದ ಐವತ್ತು ಸಾವಿರ) ಮೀರಿರಬಾರದು. ಪ್ರತಿಭಾವಂತ ವಿದ್ಯಾರ್ಥಿಯಾಗಿರಬೇಕು. 5ನೇ ತರಗತಿಯಲ್ಲಿ ಶೇ. 60 ರಷ್ಟು ಅಂಕ ಪಡೆದಿರಬೇಕು. ನಿಗದಿಪಡಿಸಲಾದ ಗುರಿಯಲ್ಲಿ ಬಾಲಕಿಯರಿಗೆ ಶೇ.50ರಷ್ಟು ಮೀಸಲಾತಿ ಇರುತ್ತದೆ. ಒಂದು ಕುಟುಂಬದಲ್ಲಿ ಎರಡು ಮಕ್ಕಳಿಗೆ ಮಾತ್ರ, ಅಂದರೆ ಒಬ್ಬ ಬಾಲಕ ಮತ್ತು ಒಬ್ಬ ಬಾಲಕಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಒಂದು ವೇಳೆ ಈಗಾಗಲೇ ಪ್ರತಿಷ್ಠಿತ ಶಾಲೆಯಲ್ಲಿ ಬಾಲಕ ಮತ್ತು ಬಾಲಕಿ ಆಯ್ಕೆಯಾಗಿದ್ದಲ್ಲಿ ಪುನಃ ಬಾಲಕ ಮತ್ತು ಬಾಲಕಿ ಅರ್ಜಿ ಸಲ್ಲಿಸು ಅವಕಾಶವಿರುವುದಿಲ್ಲ. 5ನೇ ತರಗತಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸುವುದು. ಪೋಷಕರ ನಿಗಧಿತ ಅರ್ಜಿಯೊಂದಿಗೆ ಜೊತೆಗೆ ನಾಲ್ಕು ಪಾಸ್‍ಪೋರ್ಟ್ ಸೈಜ್ ಭಾವಚಿತ್ರ, 5ನೇ ತರಗತಿಯ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಗ್ರಾಮೀಣ ಪ್ರದೇಶದವರಾಗಿದ್ದರೆ ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ ಹಾಗೂ ಬಡತನ ರೇಖೆಗಿಂತ ಕೆಳಗಿನ ಅತಿ ಹಿಂದುಳಿದ ವರ್ಗದ ಮೀಸಲಾತಿ ಮತ್ತು ಇತ್ಯಾದಿ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿಗಳು ಕಡ್ಡಾಯವಾಗಿ ಇದೇ ಜಿಲ್ಲೆಯಾಗಿರಬೇಕು. ಬೇರೆ ಜಿಲ್ಲೆಯ ವಿದ್ಯಾರ್ಥಿಗಳ ಅರ್ಜಿಗಳನ್ನು ಅಂಗೀಕರಿಸಲಾಗುವುದಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page