ಬಿಜೆಪಿ ನೇತೃತ್ವದ ಸರ್ಕಾರ ದೇಶದ ಜನರ ಸಂಪತ್ತನ್ನು ಕೆಲವೇ ಶತ ಕೋಟ್ಯಾಧಿಪತಿಗಳಿಗೆ ಧಾರೆ ಎರೆದಿದೆ ಸಿ.ವೈ. ಶಿವರುದ್ರಪ್ಪ

by | 29/05/24 | ಸುದ್ದಿ

ಚಳ್ಳಕೆರೆ ಮೋದಿ ಸರ್ಕಾರ ದೇಶದ ಕಾನೂನುಗಳನ್ನು ಕಾರ್ಪೊರಿಕ್ ಸಾಗರ ಪ ತಿದ್ದುಪಡಿ ಮಾಡಿ, ಅವುಗಳ ಲಕ್ಷಾಂತರ ಕೋಟಿ ರೂಗಳ ಸಾಲ ಮನ್ನಾ ಮಾಡಿದೆ ದೇಶದ ಬಹ ಸಂಖ್ಯಾತ ಜನತೆ ಸುಭದ್ರ ಉದ್ಯೋಗವಿಲ್ಲದೆ ದಿನೇ ದಿನೇ ಬಡವರಾಗುತ್ತಿದ್ದಾರೆ ಬಂಡವಾಳ ಶಾಹಿ ವರ್ಗ ಜನ ಸಿರಿವಂತಿಕೆಯಲ್ಲಿ ಮೆರೆಯುತ್ತಿದೆ ಎಂದು ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯೆ, ಕಾಂಗ್ರೆಸ್ ಮುಖಂಡೆ ಡಾ.ಸುಜಾತ ತಿಳಿಸಿದರು.
ಭಾರತೀಯ ಕಮ್ಯುನಿಸ್ಟ್ ಪಕ್ಷದ ನಗರದ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರು, ರೈತರು, ವಿದ್ಯಾರ್ಥಿಗಳು, ಯುವಜನರು, ಚಳ್ಳಕೆರೆ ಲೋಡಿಂಗ್ ಅನ್ ಲೋಡಿಂಗ್ ಹಮಾಲರು, ಮನೆಕೆಲಸಕಾರರು, ಅಂಗನವಾಡಿ ಕಾರ್ಯ ಕರ್ತರು, ಸಹಾಯಕಿಯರು, ಅಕ್ಷರ ದಾಸೋಹ, ಬಿಸಿಯೂಟ ಕಾರ್ಯಕರ್ತರು, ಕಟ್ಟಡ ಕಟ್ಟುವ ಕಾರ್ಮಿ ಕರು, ಆಶಾ ಕಾರ್ಯಕರ್ತರು, ರಸ್ತೆ ಬದಿಯ ವ್ಯಾಪಾರಸ್ಥರು, ಲಾರಿ ಟ್ಯಾಂಕರ್‌ ಡ್ರೈವರ್‌ಗಳು, ಹೊಟ್ಟು ತುಂಬುವ ಹಾಗೂ ಗ್ರಾಮ ಪಂಚಾಯಿತಿ ನೀರಗಂಟಿ ಜವಾನ ಜಾಡಮಾಲಿಗಳು, ಲೋಡ್ ಅನ್‌ಲೋಡ್ ಮಾಡುವ ಹಮಾಲರು ಹಾಗೂ ಎಲ್ಲಾ ವಿಭಾಗದ ಶ್ರಮಜೀವಿಗಳ ಸಹಯೋಗದಲ್ಲಿ ಏರಗಪಡಿಸಿದ್ದ ಮೇ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು
ನಮ್ಮ ಸಂಸದೀಯ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಇವೆಲ್ಲವೂ ಚರ್ಚೆಯಾಗಿ ಸರ್ಕಾರದ ನೀತಿ, ಯೋಜನೆಗಳು, ಶಾಸನಗಳು ರೂಪುಗೊಳ್ಳಬೇಕಾದ ಅಧಿಕೃತ ಸ್ಥಳ ಸಂಸತ್ತು ಜನರ ಬದುಕಿಗೆ ಸಂಬಂಧಿಸಿದೆ ಈ ಪ್ರಮುಖ ವಿಷಯಗಳನ್ನು ಜನಪರವಾಗಿ ಚರ್ಚಿಸಲು, ಇವುಗಳನ್ನು ವಸ್ತುನಿಷ್ಠ ವಾಗಿ ಪ್ರಶ್ನಿಸಲಿ ಇಂದು ಸಂಸತ್ತಿನಲ್ಲಿ ದಿಟ್ಟ ಹೋರಾಟಗಾರರ ಜರೂರಿದೆ. ಜನರ ಬದುಕಿನ ಬವಣೆ ಗಳ ಬಗ್ಗೆ ಮಾತನಾಡುವ ಪ್ರಾಮಾಣಿಕ ಗಟ್ಟಿಧ್ವನಿಗಳು ದೇಶದ ಸಂಸದರಾಗಿ ಆಯ್ಕೆಯಾಗಬೇಕಿದೆ. ನೋಟು ಕೊಟ್ಟು ವೋಟು ಕೇಳುವವರನ್ನು ತಿರಸ್ಕರಿಸಲೇಬೇಕಿದೆ.

ರಾಜ್ಯ ಮಂಡಳಿ ಸದಸ್ಯ, ಜಿಲ್ಲಾ ಮಂಡಳಿ ಅಧ್ಯಕ್ಷ ಸಿ.ವೈ. ಶಿವರುದ್ರಪ್ಪ ಮಾತನಾಡಿ, ಪ್ರಧಾನಿ ನರೇಂದ್ರಮೋದಿಯವರ ‘ಅಚ್ಚೇದಿನ್’ ದಿಂದ ‘ಅಮೃತ ಕಾಲ’ದ ವರೆಗೆ ಒಂದು ದಶಕದಲ್ಲಿನ ದೇಶದ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಸ್ಥಿತಿಗತಿಯನ್ನು ವಿಶ್ಲೇಷಣೆ ಮಾಡಿದರೆ ಬಿಜೆಪಿ ನೇತೃತ್ವದ ಸರ್ಕಾರ ದೇಶದ ಜನರ ಸಂಪತ್ತನ್ನು ಕೆಲವೇ ಶತ ಕೋಟ್ಯಾಧಿಪತಿಗಳಿಗೆ ಧಾರೆ ಎರೆದಿದೆ. ಇದರ ಪರಿಣಾಮ ದೇಶದ ಶೇ. 1ರಷ್ಟು ಶ್ರೀಮಂತರ ಬಳಿ ಶೇ. 40 ರಷ್ಟು ಸಂಪತ್ತು ಶೇಖರಣೆ ಆಗಿದೆ. ಶೇ. 50 ರಷ್ಟು ಭಾರತದ ಜನಸಂಖ್ಯೆ ಕೇವಲ ಶೇ. 3 ರಷ್ಟು ಸಂಪತ್ತಿನಲ್ಲಿ ಪಾಲು ಪಡೆದಿದ್ದಾರೆ. ಇದು ಸರ್ಕಾರದ ಉಳ್ಳವರ ಪರವಾದ ನೀತಿಗೆ ಸಾಕ್ಷಿಯಾಗಿದೆ. ಈ ರೀತಿ ಬದಲಾಗಬೇಕಿದೆ ಇಲ್ಲವಾದರೆ ಸಮಾಜದಲ್ಲಿ ಅಸಮಾನತೆ ಹೆಚ್ಚುತ್ತ ಮುಂದೆ ಹೆಚ್ಚೆಚ್ಚು ಸಂಘರ್ಷಗಳಿಗೆ ಕಾರಣವಾಗಿ ದೇಶದ ಬಹು ಸಂಖ್ಯೆಯ ಜನ ಹಸಿವಿನಿಂದ ಸಾಯಬೇಕಾಗುತ್ತದೆ. ಈಗಾಗಲೇ ಹಸಿವಿನ ಸಾವುಗಳಿಗೆ ನಮ್ಮ ದೇಶ ಸಾಕ್ಷಿಯಾಗಿದೆ. ವಿಶ್ವ ಹಸಿವಿನ ಸೂಚ್ಯಂಕದಲ್ಲಿ ಭಾರತವು 125 ದೇಶಗಳ ಪೈಕಿ 111ನೇ ಸ್ಥಾನ ಪಡೆದು ಕಳಪೆ ಪ್ರದರ್ಶನ ನೀಡಿದೆ ಎಂದರು
ದೊಡ್ಡ ಉಳ್ಳಾರ್ತಿ ಕರಿಯಣ್ಣ ಮಾತನಾಡಿ, ಮೇ ದಿನಾಚರಣೆ ಐತಿಹಾಸಿಕ ಹೋರಾಟದ ಸಾಂಕೇತಿಕ ದಿನ 139 ವರ್ಷಗಳ ಹಿಂದೆ ಬಂಡವಾಳ ಶಾಹಿಗಳ ವಿರುದ್ಧ ಧ್ವನಿ ಎತ್ತಿದ ಕಾರ್ಮಿಕರ ಸಂಘಟಿತ ಕೂಗು ವಿಶ್ವದ ದುಡಿಯುವ ವರ್ಗವನ್ನು ಬಡಿದೆಬ್ಬಿಸಿದ ದಿನ ಅದು. ವಿಶ್ವದ ಕಾರ್ಮಿಕರೇ ಒಂದಾಗಿ ಎಂದು ಘೋಷಣೆಗೆ ನಾಂದಿ ಹಾಕಿದ ದಿನವೇ ಮೇ 01, 1886. ದೇಶದಲ್ಲಿ ಮತ್ತೆ ಚುನಾವಣೆ ಬಂದಿದೆ. ಇದೇ ಸಂದರ್ಭದಲ್ಲಿ ಅನ್ನದಾತ ಸಾವು ಬದುಕಿನ ಮಧ್ಯೆ ಹೊರಾಡುತಿದ್ದಾನೆ. ಕಾರ್ಮಿಕ ತನ್ನ ಉದ್ಯೋಗವನ್ನು ಉಳಿಸಿಕೊಳ್ಳಲು ಹೆಣಗುತ್ತಿದ್ದರೆ ಯುವಜನತೆ ನೌಕರಿಗಾಗಿ ಅಲೆಯುತ್ತಿದ್ದಾರೆ. ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಸಂಪನ್ಮೂಲಗಳ ಹುಡುಕಾಟದಲ್ಲಿದ್ದರೆ, ದಲಿತರು-ಅಲ್ಪಸಂಖ್ಯಾತರು-ಮಹಿಳೆಯರು ಘನತೆಯ ಬದುಕಿನ ಹಕ್ಕುಗಳಿಗಾಗಿ ಆಗ್ರಹಿಸುತ್ತಿದ್ದಾರೆ ಎಂದರು

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page