ಮಡಿವಾಳ ಮಾಚಯ್ಯರವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ನಾವೆಲ್ಲರೂ ಸಾಗಬೇಕಿದೆ:ತಹಶೀಲ್ದಾರ್ ರೆಹಾನ್ ಪಾಷ

by | 01/02/24 | ಸುದ್ದಿ

ಚಳ್ಳಕೆರೆ: ಮಡಿವಾಳ ಸಮುದಾಯವು ಕಾಯಕ ನಿಷ್ಠೆ ತೋರುವ ಸಮಾಜವಾಗಿದ್ದು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿದಾಗ ಮಾತ್ರ ಮಡಿವಾಳ ಸಮಾಜವು ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ತಹಶೀಲ್ದಾರ್ ರೆಹಾನ್ ಪಾಷ ಅಭಿಪ್ರಾಯ ಪಟ್ಟರು

ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಮಡಿವಾಳ ಮಾಚಿದೇವ ಜಯಂತಿ ಆಚರಣೆಯಲ್ಲಿ ಪಾಲ್ಗೊಂಡು ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡುತ್ತಾ 12ನೇ ಶತಮಾನದಲ್ಲಿ ಬಸವಣ್ಣನವರ ಜೊತೆ ಸೇರಿ ಅನುಭವ ಮಂಟಪದಲ್ಲಿ ಮಹಿಳೆಯರ ಏಳಿಗೆಗಾಗಿ ಹಾಗೂ ವಚನ ಸಾಹಿತ್ಯ ಸೇರಿದಂತೆ ಹಲವು ಮಹತ್ವದ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಮಾಜಕ್ಕೆ ಉತ್ತಮ ಸಂದೇಶಗಳನ್ನು ಸಾರಿದಂತಹ ಮಹಾನ್ ಮಾನವತಾವಾದಿಯಾಗಿದ್ದರು ಮಡಿವಾಳ ಸಮುದಾಯವು ತಾನು ಮೈಲಿಗೆಯಾಗಿ ಬೇರೆಯವರ ಮನಸ್ಸು ಮತ್ತು ವಸ್ತ್ರವನ್ನು ಶುಭ್ರಗೊಳಿಸುವ ಕಾಯಕದಲ್ಲಿ ತೊಡಗಿದ್ದಾರೆ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಬಳಸಿಕೊಂಡು ಆರ್ಥಿಕವಾಗಿ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಮಡಿವಾಳ ಸಮಾಜವು ಪ್ರಗತಿ ಸಾಧಿಸಬೇಕಿದೆ ಎಂದು ತಿಳಿಸಿದರು.

ಮಡಿವಾಳ ಸಮಾಜದ ಗೌರವಧ್ಯಕ್ಷ ಎನ್ ಮಂಜುನಾಥ ಮಾತನಾಡಿ ನಮ್ಮ ಸಮುದಾಯಕ್ಕೆ ಎಸ್ ಸಿ ಮೀಸಲಾತಿ ನೀಡಬೇಕೆಂದು ಹಲವು ವರ್ಷಗಳಿಂದ ಬೇಡಿಕೆ ಇದ್ದು ಈಗಾಗಲೇ ಅನ್ನಪೂರ್ಣಮ್ಮ ವರದಿ ಸರ್ಕಾರದ ಕೈ ಸೇರಿದ್ದರು ನಮ್ಮ ಭಾವನೆಗಳಿಗೆ ಬೆಲೆ ಕೊಡದೆ ಆಳುವ ಸರ್ಕಾರಗಳು ಕೇವಲ ನಮ್ಮ ಮಡಿವಾಳ ಸಮುದಾಯವನ್ನು ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಬಳಸಿಕೊಂಡು ಮೂಲೆಗುಂಪು ಮಾಡುತ್ತಿದ್ದಾರೆ ಇದರಿಂದಾಗಿ ರಾಜಕೀಯವಾಗಿ ಆರ್ಥಿಕವಾಗಿ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಸಮಾಜವು ಪ್ರಗತಿ ಹೊಂದಲು ಸಾಧ್ಯವಾಗುತ್ತಿಲ್ಲ ಇನ್ನಾದರೂ ನಮ್ಮ ಕೂಗನ್ನು ಕೇಳಿಸಿಕೊಂಡು ನಮಗೆ ಸಿಗಬೇಕಾದ ಮೀಸಲಾತಿಯನ್ನು ನೀಡಬೇಕು ನಮಗೆ ಮೀಸಲಾತಿ ದೊರೆಯಬೇಕಾದರೆ ನಮ್ಮ ಸಮುದಾಯವು ಒಗ್ಗಟ್ಟಿನಿಂದ ಹೋರಾಡಿದಾಗ ಮಾತ್ರ ಪಡೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಸಮಾಜದ ಅಧ್ಯಕ್ಷ ನಾಗರಾಜ್ ಮಾತನಾಡಿ ಮಡಿವಾಳ ಸಮಾಜದ ಮುಖಂಡರ ಬೇಜವಾಬ್ದಾರಿತನದಿಂದ ತಾಲೂಕಿನ ಮಡಿವಾಳ ಸಮಾಜಕ್ಕೆ ಯಾವುದೇ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ತಾಲೂಕಿನಲ್ಲಿ ಎಲ್ಲ ಸಮುದಾಯಗಳಿಗೂ ವಿದ್ಯಾರ್ಥಿ ನಿಲಯ ಸಮುದಾಯ ಭವನಗಳು ಇದ್ದರು ನಮ್ಮ ಸಮುದಾಯಕ್ಕೆ ಇಂತಹ ಯಾವುದೇ ಸೌಲಭ್ಯಗಳು ದೊರೆಯಲು ಸಾಧ್ಯವಾಗಿಲ್ಲ ತಾಲೂಕು ಆಡಳಿತದ ಅಧಿಕಾರಿಗಳ ಗಮನ ಸೆಳೆಯುವಲ್ಲಿ ನಾವು ವಿಫಲವಾಗಿದ್ದೇವೆ ಮುಂದಿನ ದಿನಗಳಲ್ಲಿ ಶಾಸಕರ ಮೂಲಕ ನಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕಿದೆ ಮಾರ್ಚ್ 6ರಂದು ತಾಲೂಕಿನಲ್ಲಿ ಮಡಿವಾಳ ಸಮಾಜದ ಸಮ್ಮೇಳನವನ್ನು ಅದ್ದೂರಿಯಾಗಿ ಹಮ್ಮಿಕೊಂಡಿದ್ದು ಗ್ರಾಮೀಣ ಹಾಗೂ ನಗರ ಪ್ರದೇಶದ ಮಡಿವಾಳ ಬಾಂಧವರು ಭಾಗವಹಿಸಿ ಶಾಸಕರ ಮೂಲಕ ಸರ್ಕಾರಕ್ಕೆ ತಮ್ಮ ಹಕ್ಕೋತಾಯಗಳನ್ನು ಮಂಡಿಸುವ ಕೆಲಸ ಮಾಡೋಣ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಡಿವಾಳ ಮಾಚಿದೇವರ ಕುರಿತು ಸಂಜೀವಿನಿ ಲ್ಯಾಬ್ ಎಂಎನ್ ಮೃತ್ಯುಂಜಯ ಉಪನ್ಯಾಸ ನೀಡಿದರು

ಈ ಸಂದರ್ಭದಲ್ಲಿ ಮಾಜಿ ನಗರಸಭೆ ಸದಸ್ಯ ರವಿಕುಮಾರ್ ಕುಶಾಲಪ್ಪ ವಿಜಯ್ ಕುಮಾರ್ ಆರ್ಟ್ಸ ನ್ ಪ್ರಕಾಶ್ ಎನ್ ರಾಜಣ್ಣ ಮೂರ್ತಿ ನಾಗರಾಜ್ ಬಾಲಾಜಿ ಚಂದ್ರಣ್ಣ ಶೈಲಜಾ ಮಂಜುನಾಥ್ ಹೆಚ್ ರಂಗಸ್ವಾಮಿ ಎಂ ರವಿ ಎಂ ವೀರೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page