ಮಳೆಯಿಂದಾಗುವ ಹಾನಿ ತಡೆಯಲು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಿ-ಡಿಸಿ ದಿವ್ಯಪ್ರಭು ಜಿ.ಆರ್.ಜೆ. ಸೂಚನೆ

by | 23/05/23 | ಸುದ್ದಿ


ಚಿತ್ರದುರ್ಗ ಮೇ.23:
ಮಳೆ ಮತ್ತು ಪ್ರವಾಹದಿಂದ ಜಿಲ್ಲೆಯಲ್ಲಿ ಯಾವುದೇ ಜೀವಹಾನಿ ಆಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು, ಹಾನಿಗೆ ಸಂಬಂಧಿಸಿದಂತೆ ಸಂತ್ರಸ್ಥರಿಗೆ 48 ಗಂಟೆಯೊಳಗಾಗಿ ತ್ವರಿತವಾಗಿ ಪರಿಹಾರ ನೀಡಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳು ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿ, ಈಗಾಗಲೇ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ. ಮಳೆ ಹಾನಿಗೆ ಸಂಬಂಧಪಟ್ಟಂತೆ ಮನೆ ಹಾನಿ, ಬೆಳೆ ಹಾನಿ, ಜಾನುವಾರು ಹಾಗೂ ಜೀವಹಾನಿ ಉಂಟಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ವರದಿ ಪಡೆದು ತಕ್ಷಣವೇ ಪರಿಹಾರ ನೀಡಬೇಕು. ತಹಸಿಲ್ದಾರರು ವಿಳಂಬಕ್ಕೆ ಅವಕಾಶ ಮಾಡಿಕೊಡದೆ, ಸಂಬಂಧಪಟ್ಟ ಅಧಿಕಾರಿಗಳಿಂದ ಅಗತ್ಯ ವರದಿ ಪಡೆದು, ಆಯಾ ಕ್ಷೇತ್ರಗಳ ಜನಪ್ರತಿನಿಧಿಗಳ ಗಮನಕ್ಕೆ ತಂದು 48 ಗಂಟೆಯೊಳಗಾಗಿ ಸಂತ್ರಸ್ತರಿಗೆ ಮಾರ್ಗಸೂಚಿಯನುಸಾರ ಪರಿಹಾರ ನೀಡಬೇಕು. ಅತಿವೃಷ್ಟಿ ಹಾಗೂ ಪ್ರವಾಹದಿಂದ ಉಂಟಾಗಬಹುದಾದ ಹಾನಿ ತಡೆಯಲು ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳುವ ಮೂಲಕ ಯಾವುದೇ ಜೀವಹಾನಿಯಾಗದ ರೀತಿಯಲ್ಲಿ ನೋಡಿಕೊಳ್ಳಬೇಕು ಎಂದು ತಾಕೀತು ಮಾಡಿದರು.
ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯಾಗಿದ್ದರೆ ಜಂಟಿ ಸಮೀಕ್ಷೆ ಮೂಲಕ ಪರಿಶೀಲನೆ ನಡೆಸಿ, ನಿಖರವಾದ ಮಾಹಿತಿ ಸಂಗ್ರಹಿಸಿ, ವಸ್ತುನಿಷ್ಟ ವರದಿ ತಯಾರಿಸಬೇಕು. ಮಳೆಗಾಲದಲ್ಲಿ ಡೆಂಗೀ, ಮಲೇರಿಯಾ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಆರೋಗ್ಯ ಇಲಾಖೆ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮ ವಹಿಸಬೇಕು. ಶಿಥಿಲಗೊಂಡಿರುವ ಅಂಗನವಾಡಿ ಕೇಂದ್ರಗಳು ಮತ್ತು ಶಾಲಾ ಕೊಠಡಿಗಳನ್ನು ಗುರುತಿಸಿ, ಅಗತ್ಯ ಕ್ರಮ ವಹಿಸಬೇಕು ಎಂದು ತಿಳಿಸಿದರು.
510 ಹೆ. ಕೃಷಿ, 269 ಹೆ. ತೋಟಗಾರಿಕೆ ಬೆಳೆ ಹಾನಿ :
ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆಯಿಂದಾಗಿ ಈ ವರ್ಷ ಮಾರ್ಚ್ 15 ರಿಂದ ಮೇ. 23 ರವರೆಗೆ ಜಿಲ್ಲೆಯಲ್ಲಿ 510.8 ಹೆ. ಕೃಷಿ ಬೆಳೆ ಹಾನಿಗೀಡಾಗಿದೆ, ಅಲ್ಲದೆ 269.07 ಹೆ. ತೋಟಗಾರಿಕೆ ಬೆಳೆ ಹಾನಿಯಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, 05 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ. 15 ಚಿಕ್ಕ ಜಾನುವಾರುಗಳು, 03 ದೊಡ್ಡ ಜಾನುವಾರುಗಳು ಸಾವನ್ನಪ್ಪಿದ್ದು ಮಾರ್ಗಸೂಚಿಯನುಸಾರ ಪರಿಹಾರ ವಿತರಿಸಲಾಗಿದೆ. 97 ಮನೆಗಳು ಭಾಗಶಃ ಹಾನಿಗೀಡಾಗಿದ್ದು, ಇದಕ್ಕೆ ಸಂಬಂಧಿಸಿದಂತೆ 6.28 ಲಕ್ಷ ರೂ ಪರಿಹಾರ ವಿತರಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಟಿ. ಜವರೇಗೌಡ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಅತಿವೃಷ್ಟಿಯಿಂದ ಉಂಟಾಗುವ ಹಾನಿಗೆ ಸಂಬಂಧಿಸಿದಂತೆ ವಿಳಂಬಕ್ಕೆ ಅವಕಾಶವಿಲ್ಲದಂತೆ ತ್ವರಿತವಾಗಿ ಪರಿಹಾರ ವಿತರಣೆಯಾಗಬೇಕು. ಹಾನಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸುವ ಅಧಿಕಾರಿಗಳು ವಸ್ತುಸ್ಥಿತಿಗೆ ಅನುಗುಣವಾಗಿ ಪರಿಹಾರಕ್ಕೆ ಬೇಡಿಕೆ ಸಲ್ಲಿಸಬೇಕು. ತಪ್ಪಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆಯಾಗಿಸಿ, ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಜಿಲ್ಲೆಯಲ್ಲಿ ಮೇವು ಸಮಸ್ಯೆ ಇಲ್ಲ:
ಜಿಲ್ಲೆಯಲ್ಲಿ ಮೇವು ಸಮಸ್ಯೆ ಇಲ್ಲ. 16 ವಾರಗಳಿಗೆ ಆಗುವಷ್ಟು ಮೇವು ಲಭ್ಯವಿದೆ ಎಂದು ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು. ಮಳೆಗಾಲದಲ್ಲಿ ಜಾನುವಾರುಗಳಿಗೆ ಗಂಟಲುಬೇನೆ ರೋಗ ಕಾಣಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಈಗಾಗಲೇ 60 ಸಾವಿರ ಲಸಿಕೆ ತರಿಸಿಕೊಳ್ಳಲಾಗಿದೆ ಎಂದರು. ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ಬೇಡಿಕೆಗೆ ಅನುಗುಣವಾಗಿ ಲಸಿಕೆ ಪಡೆದುಕೊಳ್ಳಲು ಕ್ರಮ ವಹಿಸಬೇಕು ಎಂದು ತಿಳಿಸಿದರು.
ಕೆರೆಗಳು ಹಾನಿಯಾಗದಂತೆ ನೋಡಿಕೊಳ್ಳಿ:
ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಪಿಆರ್‍ಇಡಿ ಸೇರಿದಂತೆ ಬಹಳಷ್ಟು ಕೆರೆಗಳಲ್ಲಿ ಸದ್ಯ ನೀರಿದೆ. ಮುಂದೆ ಮಳೆ ಬಂದಲ್ಲಿ ಶೀಘ್ರ ಭರ್ತಿಯಾಗುತ್ತವೆ. ಹೀಗಾಗಿ ಎಲ್ಲ ಕೆರೆಗಳ ಸಾಮಥ್ರ್ಯ ಪರಿಶೀಲನೆಗೆ ಸಮೀಕ್ಷೆ ಕೈಗೊಳ್ಳಬೇಕು. ಕೆರೆಗಳು ಒಡೆಯದಂತೆ, ಕೆರೆಗಳ ಬಂಡ್‍ಗಳನ್ನು ಬಲಪಡಿಸುವುದು ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು. ಕೆರೆಗಳ ಕೋಡಿ ಹಾಗೂ ನೀರು ಹರಿವು ಮಾರ್ಗಗಳನ್ನು ಸ್ವಚ್ಛಗೊಳಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ರಸ್ತೆ, ಸೇತುವೆ, ವಿದ್ಯುತ್ ಪುನರ್‍ಸ್ಥಾಪನೆ :
ಜಿಲ್ಲೆಯಲ್ಲಿ ಅತಿವೃಷ್ಟಿಯಾದಲ್ಲಿ, ಉಂಟಾಗಬಹುದಾದ ರಸ್ತೆ, ಸೇತುವೆಗಳ ಹಾನಿ ಬಗ್ಗೆ, ಈ ಹಿಂದಿನ ವರ್ಷಗಳಲ್ಲಿ ಉಂಟಾದ ಘಟನೆಗಳಿಗೆ ಅನುಗುಣವಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ರಸ್ತೆ, ಸೇತುವೆಗಳು ಹಾನಿಯಾದಲ್ಲಿ, ಕೂಡಲೆ ರಸ್ತೆ ಸಂಪರ್ಕ ಪುನರ್‍ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು. ಎಲ್ಲೆಲ್ಲಿ ರಸ್ತೆ, ಸೇತುವೆ ಹಾನಿಗೀಡಾಗುವ ಸಂಭವ ಇರುವ ಪ್ರದೇಶಗಳ ಬಗ್ಗೆ ಮಾಹಿತಿ ಇರಬೇಕು. ಶೀಘ್ರದಲ್ಲಿಯೇ ಶಾಲಾ ಕಾಲೇಜುಗಳು ಪ್ರಾರಂಭವಾಗಲಿದ್ದು, ರಸ್ತೆ, ಸೇತುವೆ ಹಾನಿಯಿಂದ ಮಕ್ಕಳು ಶಾಲೆಗೆ ತೆರಳಲು ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಗಾಳಿ-ಮಳೆಯಿಂದ ವಿದ್ಯುತ್ ಕಂಬಗಳು ಹಾನಿಗೀಡಾದಲ್ಲಿ, ಅತ್ಯಂತ ಕಡಿಮೆ ಸಮಯದಲ್ಲಿ ಸರಿಪಡಿಸಿ, ವಿದ್ಯುತ್ ಸಂಪರ್ಕ ಪುನರ್ ಸ್ಥಾಪಿಸುವ ಕೆಲಸವನ್ನು ಬೆಸ್ಕಾಂ ಅಧಿಕಾರಿಗಳು ಮಾಡಬೇಕು. ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಉಪವಿಭಾಗಾಧಿಕಾರಿಗಳು ಆಯಾ ತಹಸಿಲ್ದಾರರೊಂದಿಗೆ ಸಭೆ ನಡೆಸಿ, ವರದಿ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ದಿವಾಕರ, ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ, ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ, ತಹಶೀಲ್ದಾರ್ ನಾಗವೇಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್, ಜಂಟಿಕೃಷಿ ನಿರ್ದೇಶಕ ರಮೇಶ್ ಕುಮಾರ್, ತೋಟಗಾರಿಕೆ ಉಪನಿರ್ದೇಶಕಿ ಸವಿತಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page