ಮಾ. 04 ರಂದು ಫಲಾನುಭವಿಗಳ ಸಮಾವೇಶ ಹಾಗೂ ಹಲವು ಅಭಿವೃದ್ಧಿ ಕಾರ್ಯಗಳಿಗೆ ಸಿ.ಎಂ ಚಾಲನೆ ಊಟ, ಕುಡಿಯುವ ನೀರು, ವಾಹನಗಳ ವ್ಯವಸ್ಥೆ ಸಮರ್ಪಕವಾಗಿರಲಿ- ಡಾ. ವಿ. ರಾಮ್‍ಪ್ರಸಾತ್ ಮನೋಹರ್

by | 01/03/23 | ಸುದ್ದಿ


ಚಿತ್ರದುರ್ಗ ಮಾ. 01 :
ಮುಖ್ಯಮಂತ್ರಿಗಳು ಮಾ. 04 ರಂದು ಚಿತ್ರದುರ್ಗಕ್ಕೆ ಆಗಮಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆ ಫಲಾನುಭವಿಗಳ ಸಮಾವೇಶ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಲಿದ್ದು, ಕಾರ್ಯಕ್ರಮದಲ್ಲಿ ಸೂಕ್ತ ಊಟದ ವ್ಯವಸ್ಥೆ, ಕುಡಿಯುವ ನೀರು ಹಾಗೂ ಫಲಾನುಭವಿಗಳನ್ನು ಸುರಕ್ಷತೆಯಿಂದ ಕರೆತಂದು ವಾಪಸ್ ಕರೆದುಕೊಂಡು ಹೋಗುವವರೆಗಿನ ಎಲ್ಲ ವ್ಯವಸ್ಥೆಯೂ ಸಮರ್ಪಕವಾಗಿರುವಂತೆ ಯೋಜನೆ ರೂಪಿಸಿಕೊಳ್ಳಬೇಕು ಎಂದು ಪ್ರವಾಸೋದ್ಯಮ ಇಲಾಖೆ ನಿರ್ದೇಶಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ವಿ. ರಾಮ್‍ಪ್ರಸಾತ್ ಮನೋಹರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಫಲಾನುಭವಿಗಳ ಸಮಾವೇಶ ಆಯೋಜನೆ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿ ಲಕ್ಷಾಂತರ ಜನರು ವಿವಿಧ ಸವಲತ್ತುಗಳನ್ನು ಪಡೆದು ಫಲಾನುಭವಿಗಳಾಗಿದ್ದಾರೆ. ರೈತರು, ಮಹಿಳೆಯರು, ವಿದ್ಯಾರ್ಥಿಗಳು, ಪರಿಶಿಷ್ಟರು, ಹಿಂದುಳಿದ ವರ್ಗದವರು ಹೀಗೆ ಎಲ್ಲ ವರ್ಗಗಳ ಜನರು ಸರ್ಕಾರದ ವಿವಿಧ ಯೋಜನೆಗಳಡಿ ಒಂದಲ್ಲ ಒಂದು ಸೌಲಭ್ಯ ಪಡೆದುಕೊಂಡಿದ್ದಾರೆ. ಎಲ್ಲ ಜಿಲ್ಲೆಗಳಲ್ಲಿ ಫಲಾನುಭವಿಗಳ ಸಮಾವೇಶ ಆಯೋಜನೆಗೆ ಸರ್ಕಾರ ಸೂಚನೆ ನೀಡಿದ್ದು, ಇಲ್ಲಿನ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ನಡೆಯುವ ಕಾರ್ಯಕ್ರಮವೇ ಮೊದಲ ಸಮಾವೇಶವಾಗಿದೆ. ಮುಖ್ಯಮಂತ್ರಿಗಳೇ ಖುದ್ದಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುವುದರಿಂದ, ಸಮಾವೇಶ ಯಶಸ್ವಿಗೊಳಿಸಲು ಅಧಿಕಾರಿಗಳು ಸಕ್ರಿಯವಾಗಿ ತೊಡಗಿಸಿಕೊಂಡು, ಕ್ರಿಯಾಶೀಲರಾಗಿ ಕೆಲಸ ಮಾಡಬೇಕು. ಕೃಷಿ, ಆರೋಗ್ಯ, ಶಿಕ್ಷಣ, ಸಹಕಾರ, ಆಹಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಸಮಾಜ ಕಲ್ಯಾಣ, ತೋಟಗಾರಿಕೆ, ಸ್ಲಂ ಬೋರ್ಡ್ ಸೇರಿದಂತೆ ವಿವಿಧ ಇಲಾಖೆಗಳಿಂದ ಕನಿಷ್ಟ 75 ಸಾವಿರದಿಂದ 01 ಲಕ್ಷದವರೆಗೆ ಫಲಾನುಭವಿಗಳನ್ನು ಸಮಾವೇಶಕ್ಕೆ ಸೇರಿಸಲು ಆಯಾ ಇಲಾಖಾ ಅಧಿಕಾರಿಗಳು ಕ್ರಮ ವಹಿಸಬೇಕು. ಆಯಾ ಇಲಾಖೆ ಅಧಿಕಾರಿಗಳು ಸಮಾವೇಶಕ್ಕೆ ಕರೆತರಲು ವಾಹನದ ವ್ಯವಸ್ಥೆ, ಮಾರ್ಗ, ಪ್ರತಿ 25 ರಿಂದ 30 ಫಲಾನುಭವಿಗಳಿಗೆ ಒಬ್ಬರಂತೆ ಮೇಲ್ವಿಚಾರಕರನ್ನು ನಿಯೋಜಿಸಿ, ಫಲಾನುಭವಿಗಳನ್ನು ಸಮಾವೇಶದ ಸ್ಥಳಕ್ಕೆ ಕರೆತಂದು, ವಾಪಸ್ ಸುರಕ್ಷಿತವಾಗಿ ಹಿಂದಿರುಗುವವರೆಗಿನ ಯೋಜನೆಯನ್ನು ರೂಪಿಸಿಕೊಳ್ಳಬೇಕು. ಫಲಾನುಭವಿಗಳ ವಿವರ, ವಾಹನದ ವಿವರ, ಮಾರ್ಗ, ಮೇಲ್ವಿಚಾರಕರ ನಿಯೋಜನೆ ಕುರಿತ ಸಮಗ್ರ ವಿವರವನ್ನು ಒಂದು ದಿನದ ಒಳಗಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಕಾರ್ಯಕ್ರಮ ಯಶಸ್ವಿಗೊಳಿಸಲು ಪ್ರಮುಖವಾಗಿ ಊಟ, ಕುಡಿಯುವ ನೀರು ಹಾಗೂ ವಾಹನದ ವ್ಯವಸ್ಥೆ ಯೋಜಿತ ರೀತಿಯಲ್ಲಿ ಆಗಬೇಕು, ಇದರಲ್ಲಿ ಯಾವುದೇ ಗೊಂದಲ ಇರಬಾರದು. ಫಲಾನುಭವಿಗಳಿಗೆ ಇಲಾಖಾವಾರು ಪ್ರತ್ಯೇಕವಾಗಿ ಬ್ಯಾಡ್ಜಸ್ ರೂಪಿಸಿ ವಿತರಿಸಬೇಕು ಎಂದರು.
ಸಮಾವೇಶ ಆವರಣದಲ್ಲಿ ಫಲಾನುಭವಿಗಳಿಗೆ ನೂಕುನುಗ್ಗಲು ಆಗದ ರೀತಿ ಊಟದ ಸಮರ್ಪಕ ವಿತರಣೆಗೆ ಹೆಚ್ಚಿನ ಕೌಂಟರ್‍ಗಳು ಇರಬೇಕು. ಬೇಸಿಗೆ ಬಿಸಿಲು ಹೆಚ್ಚಾಗಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಕುಡಿಯುವ ನೀರಿನ ಕೇಂದ್ರಗಳು ಇರಬೇಕು. ಊಟ, ನೀರಿನ ವಿತರಣೆಗೂ ಮುನ್ನ ಆಹಾರ ಗುಣಮಟ್ಟ ಪರಿಶೀಲನೆಯನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ನಡೆಸಿ, ದೃಢೀಕರಿಸಬೆಕು. ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವುದರಿಂದ, ಪೊಲೀಸ್ ಇಲಾಖೆಯು ಭದ್ರತಾ ವ್ಯವಸ್ಥೆಯನ್ನು ರೂಪಿಸಿಕೊಳ್ಳಬೇಕು, ಹಾಗೂ ಸಾವಿರಾರು ವಾಹನಗಳು ಬರುವುದರಿಂದ ಪಾರ್ಕಿಂಗ್‍ಗೆ ಸೂಕ್ತ ಸ್ಥಳಾವಕಾಶ ಮಾಡಿಕೊಂಡು, ಮಾರ್ಗಗಳ ನಿಯಂತ್ರಣ ವ್ಯವಸ್ಥೆ ಮಾಡಿಕೊಳ್ಳಬೇಕು. ವೇದಿಕೆಯಲ್ಲಿ ನಿಯಮಾನುಸಾರ ಶಿಷ್ಟಾಚಾರದ ಪಾಲನೆ ಆಗಬೇಕು, ಗಣ್ಯರನ್ನು ಸ್ವಾಗತಿಸುವುದು, ಗೌರವಿಸುವ ಕಾರ್ಯ ಅಚ್ಚುಕಟ್ಟಾಗಿ ಆಗಬೇಕು. ಸಮಾವೇಶಕ್ಕೆ ಶಾಲಾ ಕಾಲೇಜು ಮಕ್ಕಳನ್ನು ಕೂಡ ಕರೆತರಲಾಗುವುದರಿಂದ, ಮಕ್ಕಳ ಸುರಕ್ಷತೆ ಬಹುಮುಖ್ಯ ವಿಷಯವಾಗಿದ್ದು, ಈ ಬಗ್ಗೆ ಡಿಡಿಪಿಐ ಅವರು ಹೆಚ್ಚಿನ ಗಮನ ನೀಡಬೇಕು. ಕಾರ್ಯಕ್ರಮಕ್ಕೆ ಜಿಲ್ಲೆಯ ವಿವಿಧೆಡೆಗಳಿಂದ ವೈವಿಧ್ಯಮಯ ಕಲಾತಂಡಗಳನ್ನು ಕರೆಸಿ, ಸಮಾರಂಭವನ್ನು ಹೆಚ್ಚು ಆಕರ್ಷಿತವಾಗಿಸಬೇಕು. ಸಮಾವೇಶ ಕುರಿತಂತೆ ಆಟೋಗಳಲ್ಲಿ ಧ್ವನಿವರ್ಧಕದ ಮೂಲಕ ವ್ಯಾಪಕ ಪ್ರಚಾರ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸೂಚನೆ ನೀಡಿದರು.
ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ :
ಇದಕ್ಕೂ ಪೂರ್ವದಲ್ಲಿ ಸಭೆಯಲ್ಲಿ ಭಾಗವಹಿಸಿದ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಅವರು ಮಾತನಾಡಿ, ಮಾ. 04 ರಂದು ಫಲಾನುಭವಿಗಳ ಸಮಾವೇಶದ ಜೊತೆಗೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಕೂಡ ಮುಖ್ಯಮಂತ್ರಿಗಳು ನೆರವೇರಿಸುವುದಾಗಿ ತಿಳಿಸಿದ್ದಾರೆ. ವಿವಿಧ ಇಲಾಖೆಗಳಡಿ ಸುಮಾರು 2 ಸಾವಿರ ಕೋಟಿ ರೂ. ಗಳ ಅಭಿವೃದ್ಧಿ ಯೋಜನೆಗಳಿಗೆ ಅಂದು ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದು, ಈ ಕುರಿತಂತೆ ಆಯಾ ಇಲಾಖಾವಾರು ಕಾಮಗಾರಿಗಳು ಹಾಗೂ ಅನುದಾನದ ವಿವರವನ್ನು ಪಡೆದುಕೊಳ್ಳಬೇಕು. 500 ಕೋಟಿ ರೂ. ವೆಚ್ಚದಲ್ಲಿ ವೈದ್ಯಕೀಯ ಕಾಲೇಜು, 47 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾಡಳಿತ ಭವನ, 593 ಕೋಟಿ ರೂ. ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರು ಯೋಜನೆ, ಲೋಕೋಪಯೋಗಿ ಇಲಾಖೆಯಡಿ ಸುಮಾರು 200 ಕೋಟಿ ರೂ. ಯೋಜನೆಯ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಸುಮಾರು 90 ಕೋಟಿ ರೂ. ವೆಚ್ಚದಲ್ಲಿ ವಿವಿಧ ವಸತಿ ಯೋಜನೆಗಳಡಿ ಮನೆಗಳು, 40 ಕೋಟಿ ರೂ. ವೆಚ್ಚದಲ್ಲಿ ನಗರೋತ್ಥಾನ ಯೋಜನೆ ಕಾಮಗಾರಿಗಳು, ನಗರದಲ್ಲಿ ವಾಲ್ಮೀಕಿ ಭವನ, ಲಿಡ್ಕರ್ ಭವನಗಳ ಉದ್ಘಾಟನೆ ಸೇರಿದಂತೆ ವಿವಿಧ ಇಲಾಖೆಗಳಡಿ ಹಲವಾರು ಕಾಮಗಾರಿಗಳಿಗೆ ಮುಖ್ಯಮಂತ್ರಿಗಳು ಅದೇ ದಿನದಂದು ಚಾಲನೆ ನೀಡುವರು. ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಲು ಎಲ್ಲ ಅಧಿಕಾರಿಗಳು ಸೂಕ್ತ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ., ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್. ದಿವಾಕರ್, ಅಪರ ಜಿಲ್ಲಾಧಿಕಾರಿ ಟಿ. ಜವರೇಗೌಡ, ಉಪವಿಭಾಗಾಧಿಕಾರಿ ಚಂದ್ರಯ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page