ವಿಜೃಂಭಣೆಯಿಂದ ಜರುಗಿದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೊಡ್ಡ ಕಾರ್ತಿಕೋತ್ಸವದ ರಥೋತ್ಸವ ವೀರಗಾಸೆ ಡೊಳ್ಳು ಕುಣಿತ ಕಲಾ ತಂಡ ಮಂಗಳವಾದ್ಯಗಳೊಂದಿಗೆ ಶ್ರೀ ಗುರು ತಿಪ್ಪೇರುದ್ರಸ್ವಾಮಿಯ ದೊಡ್ಡ ಕಾರ್ತಿಕೋತ್ಸವದ ರಥೋತ್ಸವ ಸಂಭ್ರಮದಿಂದ ಶುಕ್ರವಾರ ಅದ್ದೂರಿಯಾಗಿ ನೆರವೇರಿತು.

by | 22/12/23 | ಸುದ್ದಿ


ನಾಯಕನಹಟ್ಟಿ:: ಪಟ್ಟಣದ ಕಾಯಕಯೋಗಿ ಶ್ರೀ ಗುರು ತಿಪ್ಪೇರುದ್ರಸ್ವಾಮಿಯ ದೊಡ್ಡ ಕಾರ್ತಿಕೋತ್ಸವ ಶುಕ್ರವಾರ ನೂರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು. ಮಧ್ಯಾಹ್ನ 3:30ರ ಗಂಟೆಗೆ ರಥೋತ್ಸವಕ್ಕೆ ಚಾಲನೆಯನ್ನು ನೀಡಿದರು


ಸುಮಾರು 30 ಅಡಿ ಮರದಿಂದ ನಿರ್ಮಿಸಿದ ರಥದ ಮೇಲ್ಭಾಗದಲ್ಲಿ ಕಮಾನಿನಾಕಾರದ ರಥ ಪ್ರಮುಖ ಆಕರ್ಷಣೆಯಾಗಿತ್ತು.
ನಾನಾ ಬಣ್ಣದ ಬಟ್ಟೆ ಹಾಗೂ ಬಾವುಟಗಳಿಂದ ರಥವನ್ನು ಅಲಂಕರಿಸಲಾಯಿತು.
ಉತ್ಸವ ಮೂರ್ತಿಯನ್ನು ದೇವಾಲಯದಿಂದ ತಂದು ರಥದಲ್ಲಿ ಪ್ರತಿಷ್ಠಾಪಿಸಲಾಯಿತು ಮಹಾಮಂಗಳಾರತಿ ನಂತರ ಉತ್ಸವ ಆರಂಭಗೊಂಡಿತು. ಚಿನ್ನದ ಕಿರೀಟ ಚಿನ್ನದ ಆಭರಣಗಳು ಮಲ್ಲಿಗೆ ಕನಕಾಂಬರ ಸೇವಂತಿ ಚೆಂಡು ಹೂವು ಸೇರಿದಂತೆ ನಾನ ಹೂಗಳಿಂದ ಉತ್ಸವ ಮೂರ್ತಿಯ ಅಲಂಕರಿಸಲಾಗಿತ್ತು.


ರಥಕ್ಕೆ ಅಳವಡಿಸಿದ್ದ ಬೃಹತ್ ಹೂವಿನ ಹಾರಗಳು ಗಮನ ಸೆಳೆದವು ಉತ್ಸವ ಬೀದಿಯಲ್ಲಿ ರಥ ಚಲಿಸುವಾಗ ಮಹಿಳೆಯರು ದಾರಿಗೆ ನೀರು ಹಾಕಿ ಸ್ವಚ್ಛಗೊಳಿಸಿ ಕಾಯಿ ಹಣ್ಣು ಹರಕೆ ಸಮರ್ಪಿಸಿದರು..

ಭಕ್ತರು ಹರಕೆ ಸಲ್ಲಿಸಿದರು ದೇವಾಲಯದ ಅಲಂಕೃತ ಪಟ್ಟದ ಬಸವಣ್ಣನನ್ನು ಬೆಳ್ಳಿಯ ಕಾಲು ಕಡಗ ಅಣೆಪಟ್ಟಿಗಳಿಂದ ಅಲಂಕರಿಸಲಾಗಿತ್ತು ಸಾಂಪ್ರದಾಯಿಕ ಮಂಗಳವಾದ್ಯಗಳು ಉತ್ಸವದಲ್ಲಿದ್ದವು.


ಇದೇ ಸಂದರ್ಭದಲ್ಲಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಎಚ್ ಗಂಗಾಧರಪ್ಪ, ಎಸ್ ಸತೀಶ್, ಗ್ರಾಮಸ್ಥರಾದ ಎಂ. ವೈ. ಟಿ ಸ್ವಾಮಿ, ಮಾಜಿ ಪಟ್ಟಣ ಪಂಚಾಯತಿ ಅಧ್ಯಕ್ಷ ಎನ್ ಮಹಾಂತಣ್ಣ, ಜೀವಿತ್ ಕುಮಾರ್, ಗಂಗಣ್ಣ ಉಮೇಶ್ ದಳವಾಯಿ ರುದ್ರಮುನಿ, ಸುನಿಲ್ ಕುಮಾರ್, ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಸಿಬ್ಬಂದಿಗಳು ಮತ್ತು ಅರ್ಚಕರಾದ ರವಿಕುಮಾರ್, ಅಭಿಷೇಕ್, ಪಟ್ಟಣದ ಸಮಸ್ತ ಭಕ್ತಾದಿಗಳು ನಾಯಕನಹಟ್ಟಿ ಹೋಬಳಿಯ ವಿವಿಧ ಹಳ್ಳಿಗಳ ಗ್ರಾಮಸ್ಥರು ಭಕ್ತಾದಿಗಳು ಉಪಸ್ಥಿತರಿದ್ದರು

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page