ಸಾರ್ವಜನಿಕರಿಗೆ ಫೋಸ್ಕೋ ಕಾಯ್ದೆ ಮತ್ತು ಬಾಲ್ಯ ವಿವಾಹ ನಿಷೇಧ ತಡೆ ಕಾಯ್ದೆ ಹಾಗೂ ಶಿಕ್ಷೆಯ ಕುರಿತ ಕಾನೂನಿನ ಅರಿವು ಇದ್ದರೂ ಸಹ ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಬಾಲ್ಯ ವಿವಾಹಗಳು ನಡೆಯುತ್ತಿರುವುದು ದುರ್ದೈವದ ಸಂಗತಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿಎಸ್ ರೇಖಾ .

by | 02/09/23 | ಕಾನೂನು

ಚಳ್ಳಕೆರೆ ಸೆ.2. ಕಾನೂನು ಕಟ್ಟುನಿಟ್ಟಾಗಿದ್ದರೂ ಸಹ ವ್ಯಾಪಕ ವಾಮಕ್ಕಳನ್ನು ನಾವು ಕೈಹಿಡಿದು ನಡೆಸಬೇಕಾಗಿತ್ತೋ, ಯಾವ ಮಕ್ಕಳನ್ನು ಹೆಗಲ ಮೇಲೆ ಹತ್ತಿಸಿಕೊಂಡು ಜಾತ್ರೆಯಲ್ಲಿತೆರನ್ನು ತೋರಿಸಬೇಗಾಗಿತ್ತೋ ಮತ್ತು ಯಾವ ಮಕ್ಕಳಿಗೆ ಕೈತುತ್ತು ಉಣಿಸಬೇಗಾಗಿತ್ತೋ ಅಂತಹ ಮಕ್ಕಳಿಗೆ ಬಾಲ್ಯವಿವಾಹ ಹಾಗೂ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿರುವುದು ಅಕ್ಷಮ್ಯ ಅಪರಾದವಾಗಿದೆ ಎಂದು ಬಾಲ್ಯ ವಿವಾಹ ಹಾಗೂ ಪೋಸ್ಕೋ ಕಾಯ್ದೆಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅಧಿಕಾರಿಗಳ ಜವಾಬ್ದಾರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿಎಸ್ ರೇಖಾ ವಿಷಾದ ವ್ಯಕ್ತಪಡಿಸಿದರು.
ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಾಲೂಕು ವಕೀಲರ ಸಂಘ ಪೊಲೀಸ್ ಇಲಾಖೆ ಸಂಯುಕ್ತಾಕ್ಷರದಲ್ಲಿ ಹಮ್ಮಿಕೊಂಡಿದ್ದ ಪೋಸ್ಕೋ ಕಾಯ್ದೆ ಮತ್ತು ಬಾಲ್ಯ ವಿವಾಹ ನಿಷೇಧ ತಡೆ ಕಾಯ್ದೆ ಕುರಿತು ಬಾಲ್ಯ ವಿವಾಹ ನಿಷೇಧಾಧಿಕಾರಿಗಳ ಒಂದು ದಿನದ ತರಬೇತಿ ಕಾರ್ಯಗಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಾರ್ವಜನಿಕರಿಗೆ ಫೋಸ್ಕೋ ಕಾಯ್ದೆ ಮತ್ತು ಬಾಲ್ಯ ವಿವಾಹ ನಿಷೇಧ ತಡೆ ಕಾಯ್ದೆ ಹಾಗೂ ಶಿಕ್ಷೆಯ ಕುರಿತ ಕಾನೂನಿನ ಅರಿವು ಇದ್ದರೂ ಸಹ ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಬಾಲ್ಯ ವಿವಾಹಗಳು ನಡೆಯುತ್ತಿರುವುದು ದುರ್ದೈವದ ಸಂಗತಿಯಾಗಿದ್ದು. ಪ್ರತಿಯೊಬ್ಬ ತಂದೆ ತಾಯಿ, ಮಗುವನ್ನು ಮಗುವಿನ ರೀತಿಯಲ್ಲಿ ಕಾಣಬೇಕು ಮಗುವಿಗೆ ಸಿಗಬೇಕಾದ ಸ್ವಾತಂತ್ರ್ಯ ನೀಡಬೇಕಾಗಿರುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಬಾಲ್ಯದಲ್ಲಿ ಮಕ್ಕಳಿಗೆ ವಿವಾಹ ಮಾಡುವುದರಿಂದ ಹಲವು ಸಮಸ್ಯೆಗಳು ಆ ಮಗು ಎದುರಿಸಬೇಕಾಗುತ್ತದೆ ತನ್ನ ಜೀವನವನ್ನು ಕಟ್ಟಿಕೊಳ್ಳಲು ಕನಸು ಕಾಣುವ ವಯಸ್ಸಿನಲ್ಲಿ ಒಂದು ಮಗುವಿಗೆ ತಾಯಿಯಾದರೆ ಆ ಮಗುವಿಗೆ  ಪೌಷ್ಟಿಕಾಂಶದ ಕೊರತೆಯಿಂದಾಗಿ ಜೀವನ ಭದ್ರತೆ ಇಲ್ಲದೆ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಫೋಸ್ಕೋ ಪ್ರಕರಣಗಳನ್ನು ತಡೆಗಟ್ಟಲು ಶಾಲೆಗಳಲ್ಲಿ ಶಿಕ್ಷಕರಿಗೆ ಮಕ್ಕಳ ಜೊತೆ ವರ್ತನೆಯ ಬಗ್ಗೆ ತರಬೇತಿ ನೀಡಿ ಮಕ್ಕಳನ್ನು ಯಾವ ರೀತಿ ರಕ್ಷಣೆ ಮಾಡಬೇಕು ಎಂಬುದನ್ನು ತಿಳಿಯಪಡಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಎಂ ವಿಜಯ್ ಮಾತನಾಡಿ ಚಿತ್ರದುರ್ಗ ಜಿಲ್ಲೆ, ಬಾಲ್ಯ ವಿವಾಹ ಪ್ರಕರಣಗಳಲ್ಲಿ ಎರಡನೇ ಸ್ಥಾನದಲ್ಲಿದ್ದು ಏಪ್ರಿಲ್ ನಿಂದ ಆಗಸ್ಟ್ ಮಾಹೆಯವರೆಗೆ 157 ಪ್ರಕರಣಗಳು ದಾಖಲಾಗಿದ್ದು ಇಂತಹ ಪ್ರಕರಣಗಳು ಹೆಚ್ಚಾಗಲು ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ತಿಳುವಳಿಕೆ ಮೂಡಿಸಬೇಕಾದ ಅಧಿಕಾರಿಗಳು ಸಮರ್ಪಕ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಮುಂದಿನ ದಿನಗಳಲ್ಲಿ ಅಧಿಕಾರಿಗಳು ಇಂತಹ ಪ್ರಕರಣಗಳ ಬಗ್ಗೆ ಗಮನ ಹರಿಸಲೇಬೇಕಾದ ಅನಿವಾರ್ಯತೆ ಉಂಟಾಗಿ ತಮ್ಮ ವೃತ್ತಿ ಬದುಕಿಗೆ ಧಕ್ಕೆ ಬರಬಹುದು ಎಂದು ಎಚ್ಚರಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ರೇಷ್ಮಾ ಕಲಕಪ್ಪ ಗೋಣೆ .ನ್ಯಾಯದೀಶೆ ಗಾಯತ್ರಿ ಎಸ್ ಕಾಟೆ ಡಿವೈಎಸ್ಪಿ ಟಿ.ಬಿ ರಾಜಣ್ಣ ಡಿ.ಹೆಚ್ ಓ ರಂಗನಾಥ್. ತಾಪಂ ಇಒ ಹೊನ್ನಯ್ಯ. ಸಿ ಡಿ ಪಿ ಓ ಹರಿಪ್ರಸಾದ್ .ಸಾಮಾಜಕಲ್ಯಾಣ ಇಲಾಖೆ ಮಂಜಪ್ಪ. ವಕೀಲರ ಸಂಘದ ಅಧ್ಯಕ್ಷ ಹಾಗೂ ಪದಾಧಿಕಾರಿಗಳು.ಸೇರಿದಂತೆ ವಿವಿಧ ಇಲಾಖೆಯ‌ ಅಧಿಕಾರಿಗಳು ಉಪಸ್ಥಿತರಿದ್ದರು

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page